Welcome to sunamipatrike   Click to listen highlighted text! Welcome to sunamipatrike
Tuesday, January 28, 2025
HomeAgricultureKPSC-KSDA AAO Recruitment 2024: ರಾಜ್ಯ ಕೃಷಿ ಇಲಾಖೆಯಲ್ಲಿ 945 ಕೃಷಿ ಅಧಿಕಾರಿಗಳ ನೇಮಕ, ಆಕರ್ಷಕ...

KPSC-KSDA AAO Recruitment 2024: ರಾಜ್ಯ ಕೃಷಿ ಇಲಾಖೆಯಲ್ಲಿ 945 ಕೃಷಿ ಅಧಿಕಾರಿಗಳ ನೇಮಕ, ಆಕರ್ಷಕ ಸಂಬಳ, ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ

KPSC AAO KSDA Recruitment 2024: ಕರ್ನಾಟಕ ರಾಜ್ಯ ಕೃಷಿ ಇಲಾಖೆಯು ಒಟ್ಟು 945 ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಆಯ್ಕೆಯಾದವರು ಕರ್ನಾಟಕದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಬಹುದಾಗಿದೆ. ಅಲ್ಲದೆ 40,900-83,900 ರೂ.ವರೆಗೆ ಸಂಬಳ ಪಡೆಯಬಹುದಾಗಿದೆ. ಈ ವಿಭಾಗದಲ್ಲಿ ಕೃಷಿ ಅಧಿಕಾರಿಗಳು 128 ಹಾಗೂ ಸಹಾಯಕ ಕೃಷಿ ಅಧಿಕಾರಿಗಳು 817 ಹುದ್ದೆಗಳಿವೆ.

KPSC AAO KSDA Recruitment 2024: ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (Karnataka State Department of Agriculture -KSDA) 2024 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ( Assistant Agricultural Officers -AAO) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವುದು ಹೇಗೆ? ಸಂಬಳ ಎಷ್ಟು? ಅರ್ಹತಾ ಮಾನದಂಡಗಳು ಏನು ಎಂಬ ಮಾಹಿತಿ ಇಲ್ಲಿದೆ ನೋಡಿ.

KSDA Recruitment 2024: ಕರ್ನಾಟಕ ರಾಜ್ಯ ಕೃಷಿ ಇಲಾಖೆಯು KPSC ಮೂಲಕ ಇದೇ ಸೆಪ್ಟೆಂಬರ್ ತಿಂಗಳಲ್ಲಿ​​ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನವೆಂಬರ್‌ 07 ರ ಒಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ಒಟ್ಟು 945 ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಆಯ್ಕೆಯಾದವರು ಕರ್ನಾಟಕದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಬಹುದಾಗಿದೆ. ಅಲ್ಲದೆ 40,900-83,900 ರೂ.ವರೆಗೆ ಸಂಬಳ ಪಡೆಯಬಹುದಾಗಿದೆ. ಈ ವಿಭಾಗದಲ್ಲಿ ಕೃಷಿ ಅಧಿಕಾರಿಗಳು 128 ಹಾಗೂ ಸಹಾಯಕ ಕೃಷಿ ಅಧಿಕಾರಿಗಳು 817 ಹುದ್ದೆಗಳಿವೆ.

ಅರ್ಹತಾ ಮಾನದಂಡ KSDA ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಆಹಾರ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ/ಬಯೋಟೆಕ್ನಾಲಜಿ/ಕೃಷಿ ಇಂಜಿನಿಯರಿಂಗ್‌ನಲ್ಲಿ ಬಿಎಸ್‌ಸಿ, ಬಿಟೆಕ್ ಪೂರ್ಣಗೊಳಿಸಿರಬೇಕು. ಇದರೊಂದಿಗೆ ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 07 ನವೆಂಬರ್ 2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 38 ವರ್ಷಗಳನ್ನು ಹೊಂದಿರಬೇಕಿದೆ.

ಆನ್‌ಲೈನ್‌ನಲ್ಲಿ ಅರ್ಜಿ PFD ಗಾಗಿ ಇಲ್ಲಿ ಕ್ಲಿಕ್ ಮಾಡಿ: Karnataka State Department of Agriculture to recruitment 945 Agricultural Officers through KPSC until November 7, 2024

ವಯೋಮಿತಿ ಸಡಿಲಿಕೆ ಎಸ್‌ಸಿ /ಎಸ್‌ಟಿ/ವರ್ಗ-1 ಅಭ್ಯರ್ಥಿಗಳಿಗೆ 05 ವರ್ಷಗಳು, ವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪಿ ಡಬ್ಲ್ಯೂ ಡಿ/ವಿಧವೆ ಅಭ್ಯರ್ಥಿಗಳು 10 ವರ್ಷಗಳವರೆಗೆ ಸಡಿಲಿಕೆ ಇದೆ. ಹಾಗೆಯೇ ಎಸ್‌ಸಿ /ಎಸ್‌ಟಿ/ವರ್ಗ-1 /ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವ ಹಾಗಿಲ್ಲ. ಆದರೆ ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ.ಗಳನ್ನು, ವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳು 300 ರೂ.ಗಳನ್ನು ಪಾವತಿ ಮಾಡಬೇಕಿದೆ ಹಾಗೂ ಸಾಮಾನ್ಯ ಅಭ್ಯರ್ಥಿಗಳು 600 ರೂ.ಗಳನ್ನು ಪಾವತಿ ಮಾಡಬೇಕಿದೆ.

ವೇತನ ಮಾಹಿತಿ ಕೃಷಿ ಅಧಿಕಾರಿ ಹುದ್ದೆಗೆ ಆಯ್ಕೆ ಆದವರಿಗೆ ತಿಂಗಳಿಗೆ 43,100-83,900 ರೂ.ಗಳನ್ನು ನೀಡಲಾಗುತ್ತದೆ. ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ ಆಯ್ಕೆ ಆದವರಿಗೆ 40,900-78,200 ರೂ.ಗಳನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07 ಅಕ್ಟೋಬರ್‌ 2024 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ನವೆಂಬರ್ 2024

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Click to listen highlighted text!