- ಹುಳ್ಳಿಪ್ರಕಾಶ, ಸಂಪಾದಕರು
* ಸುನಾಮಿನ್ಯೂಸ್, ಕೂಡ್ಲಿಗಿ, ಏ.10
ಧರ್ಮ ಸಂರಕ್ಷಣೆ, ಶಿಕ್ಷಣ ಸೇರಿದಂತೆ ನಾಡಿನ ಸಾಮಾಜಿಕ ಸುಧಾರಣೆಗೆ ವೀರಶೈವ ಲಿಂಗಾಯತ ಸಮುದಾಯ ನೀಡಿರುವ ಕೊಡುಗೆ ಅಪಾರವಾದುದು ಎಂದು ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಡಾ.ಎನ್ಟಿ ಶ್ರೀನಿವಾಸ ರವರು ವೀರಶೈವ ಸಮುದಾಯದ ಸೇವೆಯನ್ನು ಸ್ಮರಿಸಿದ್ದಾರೆ.
ಗುರುವಾರ ಬೆಳಿಗ್ಗೆ ಪಟ್ಟಣದ ವೀರಮದಕರಿನಾಯಕರ ವೃತ್ತದ ಬಳಿ ಇರುವ ಲೋಕನಗೌಡರ ಕಟ್ಟಡದಲ್ಲಿ ಅಖಿಲಾ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ಕಚೇರಿಯನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು.
ಜಗದ್ಗುರು ಬಸವಣ್ಣನವರ ಕಾಯಕವೇ ಕೈಲಾಸ ತತ್ವವನ್ನು ನಾನು ನಂಬಿ, ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಬರುತ್ತೀದ್ದೇನೆ. ನನ್ನ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಏಳಿಗೆಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಶ್ರೀನಿವಾಸ್ ರೆಡ್ಡಿ, ಜಿಲ್ಲಾ ಅಧ್ಯಕ್ಷರಾದ ಸಂಗಪ್ಪ, ಗೌರವ ಅಧ್ಯಕ್ಷರಾದ ಗುಂಡುಮುಣುಗು ತಿಪ್ಪೇಸ್ವಾಮಿ, ಹಿರೇಮಠದ ಶ್ರೀಗಳಾದ ಚಿದಾನಂದ ಸ್ವಾಮಿ, ತಾಲೂಕು ಅಧ್ಯಕ್ಷರಾದ ಸುನೀಲ್ ಗೌಡ, ಉಪಾಧ್ಯಕ್ಷರಾದ ಗುರುಸಿದ್ದನ ಗೌಡ, ಮುಖಂಡರಾದ ಗುಳಗಿ ವಿರೇಂದ್ರ , ಕೂಡ್ಲಿಗಿ ಪ. ಪಂ. ಅಧ್ಯಕ್ಷರಾದ ಕಾವಲಿ ಶಿವಪ್ಪನಾಯಕ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
- ತಿಪ್ಪೇಸ್ವಾಮಿ ಮೀನಕೆರಿ, ವರದಿಗಾರರು ಸುನಾಮಿ ನ್ಯೂಸ್ , ಕೂಡ್ಲಿಗಿ.