- ಹುಳ್ಳಿಪ್ರಕಾಶ, ಸಂಪಾದಕರು
* ಸುನಾಮಿನ್ಯೂಸ್, ಹೊಸಪೇಟೆ, ಏ,11
ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯಕಾರಿಣಿ ಸಭೆ ಏ,15 ರಂದು ಸಂಜೆ ನಾಲ್ಕು ಗಂಟೆಗೆ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಸಿರಾಜ್ ಶೇಖ್ ರವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಜಿಲ್ಲಾ ಪ್ರಧಾನಕಾರ್ಯದರ್ಶಿನಿಂಬಗಲ್ ರಾಮಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ 8ನೇ ವಾರ್ಡ್, ಕೊಂಡನಾಯಕ ಹಳ್ಳಿ, ಶಿವಜ್ಯೋತಿ ನಗರದಲ್ಲಿ ಇರುವ ಜಿಲ್ಲಾ ಕಾಗ್ರೇಸ್ ಸಮಿತಿ ಕಚೇರಿಯಲ್ಲಿ ಜರುಗುವ ಕಾರ್ಯಕಾರಿಣಿಯ ನೇತೃತ್ವವನ್ನು
ಎಐಸಿಸಿ ಕಾರ್ಯದರ್ಶಿ ಹಾಗೂ ಉತ್ತರ ಕರ್ನಾಟಕ ವಿಭಾಗದ ಉಸ್ತುವಾರಿ ಗೋಪಿನಾಥ್ ಪಳನಿಯಪ್ಪ,, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಎ.ವಂಸತ ಕುಮಾರ್, ವಸತಿ, ಅಲ್ಪಸಂಖ್ಯಾತರ ವಕ್ಫ್ ಇಲಾಖೆ ಸಚಿವರು ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಉಸ್ತುವಾರಿ ಸಚಿವರಾದ ಬಿ.ಜಡ್.ಜಮೀರ ಅಹಮದ್ ಖಾನ್ ಬಳ್ಳಾರಿ ಲೋಕಸಭೆ ಸದಸ್ಯರಾದ ಈ ತುಕಾರಾಮ ರವರು ವಹಿಸಲಿದ್ದಾರೆ.
ಕೆಪಿಸಿಸಿ ಪ್ರಚಾರ ಸಮಿತಿಯ ಸಹ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ. ಪರಮೇಶ್ವರ್ ನಾಯ್ಕ, ವಿಜಯನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ, ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ*, ಹರಪನಹಳ್ಳಿ ಕ್ಷೇತ್ರದ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ ರವರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರುಗಳ ಸಮ್ಮುಖದಲ್ಲಿ ಜಿಲ್ಲಾ ಕಾರ್ಯಕಾರಿಣಿ ಜರುಗಲಿದೆ ಎಂದು ನಿಂಬಗಲ್ ರಾಮಕೃಷ್ಣ ತಿಳಿಸಿದ್ದಾರೆ.
ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರುಗಳು, ತಾಲ್ಲೂಕು ಪಂಚಾಯತ್ ಸದಸ್ಯರುಗಳು, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ, ಸದಸ್ಯರುಗಳು, ಪರಾಜಿತ ಸದಸ್ಯರು, ನಾಮನಿರ್ದೇಶನ ಸದಸ್ಯರು, ಮೂಂಚೂಣಿ ಘಟಕಗಳ ರಾಜ್ಯ ಪದಾಧಿಕಾರಿಗಳು ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷ ಪದಾಧಿಕಾರಿಗಳು ಸಮಯಕ್ಕೆ ಸರಿಯಾಗಿ ತಪ್ಪದೇ ಈ ಸಭೆಗೆ ಆಗಮಿಸಬೇಕೆಂದು ಪ್ರಕಟಣೆ ಮೂಲಕ ಅವರು ಮಾನವಿ ಮಾಡಿಕೊಂಡಿದ್ದಾರೆ.
- ಹುಳ್ಳಿಪ್ರಕಾಶ, ಸಂಪಾದಕರು