* ಸುನಾಮಿನ್ಯೂಸ್, ಜುಲೈ,26
ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಪಕ್ಷದ ನಿಕಟಪೂರ್ವ ಅಧ್ಯಕ್ಷರಾದ ಕೊಗಳಿ ಮಂಜಣ್ಣ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶನಿವಾರ ಹರಪನಹಳ್ಳಿಗೆ ತೆರಳಿ 63ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತೀರುವ ಮಾಜಿ ಸಚಿವರು, ಕೆಪಿಸಿಸಿ ಪ್ರಚಾರ ಸಮಿತಿ ಕಾರ್ಯಾಧ್ಯಕ್ಷರು ಆಗಿರುವ ಪಿಟಿ.ಪರಮೇಶ್ವರ ನಾಯ್ಕ್ ಅವರನ್ನು ಸನ್ಮಾನಿಸಿ, ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.
ಸನ್ಮಾನ ಸ್ವೀಕರಿಸಿದ ಮಾಜಿ ಸಚಿವರು,
ಪಕ್ಷವನ್ನು ಸದೃಢವಾಗಿ ಸಂಘಟಿಸಬೇಕು, ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆಗೂ ತಲುಪುವಂತೆ ನಿಗಾವಹಿಸಬೇಕು. ನಮ್ಮ ಸರ್ಕಾರದ ಬಗ್ಗೆ ಜನರಿಗೆ ಬಿಜೆಪಿ ಹೇಳುವ ಸುಳ್ಳುಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕೆಂದರು.
ಯುವ ಕಾಂಗ್ರೆಸ್ ಸಮಿತಿ ನಿಕಟಪೂರ್ವ ಅಧ್ಯಕ್ಷ ಮಲ್ಲಾಪುರದ ರಾಘವೇಂದ್ರ, ಗ್ರಾಮ ಪಂಚಾಯತಿ ಸದಸ್ಯರಾದ ಸಾಸಲವಾಡ ವೀರಭದ್ರಯ್ಯ, ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬೇಲೂರು ಅಂಜಪ್ಪ, ಶಶಿಧರ ಪೂಜಾರಿ, ಇಟಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹನುಮಂತಪ್ಪ ಸೇರಿದಂತೆ ಹಲವು ಮುಖಂಡರುಗಳು ಈ ಸಮಯದಲ್ಲಿ ಜೊತೆಯಲ್ಲಿದ್ದರು.
- ಹುಳ್ಳಿಪ್ರಕಾಶ, ಸಂಪಾದಕರು, ಸುನಾಮಿನ್ಯೂಸ್, ಬೆಂಗಳೂರು.